ನರ್ಸಿಂಗ್ ಕಾಲೇಜಿನ ಹಾಸ್ಟೆಲಿನಲ್ಲಿ ಆತ್ಮಹತ್ಯಾ ಯತ್ನ ನಡೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಪಾಣತ್ತೂರು ನಿವಾಸಿ ಚೈತನ್ಯ(21) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಶನಿವಾರ ಮದ್ಯಾಹ್ನ ಕೋಜಿಕ್ಕೋಡ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು.
ಕಳೆದ ಡಸಂಬರ್ 7 ರಂದು ಕಾಞಂಗಾಡ್ ಮನ್ಸೂರ್ ಆಸ್ಪತ್ರೆಯ ನರ್ಸಿಂಗ್ ಹಾಸ್ಟೆಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಹಾಸ್ಟೆಲ್ ವಾರ್ಡನ್ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದು ಇದನ್ನು ಸಹಿಸದೆ ಚೈತನ್ಯ ಆತ್ಮಹತ್ಯೆಗೆ ಉತ್ನಿಸಿದಳೆಂದು ದೂರಲಾಗಿತ್ತು. ಗಂಭೀರ ಸ್ಥಿತಿಯಲ್ಲಿ ಆಕೆಯನ್ನು ಮಂಗಳೂರು, ಕಣ್ಣೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೊನೆಗೆ ಕೋಜಿಕ್ಕೋಡ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
0 Comments