ಪೆರ್ಮುದೆ : ಕಂಬಾರು ಶ್ರೀ ಕ್ಷೇತ್ರದಲ್ಲಿ ನಡೆದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಹಗಲಿರುಳೆನ್ನದೆ ಶ್ರಮದಾನ ಸೇವೆ ಸಲ್ಲಿಸಿದ ಸ್ವಯಂಸೇವಕರಿಗೆ ಕ್ಷೇತ್ರದ ಶಾಂಭವಿ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಜರಗಿತು.
ನೂರಾರು ಸ್ವಯಂಸೇವಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮ ಶ್ರೀ ಕೀಕಾಂಗೋಡು ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರು ಉಪಸ್ಥಿತರಿದ್ದು ಶುಭ ಹಾರೈಸಿದರು.ಕ್ಷೇತ್ರದ ಆಡಳಿತ ಮೊಕ್ತೇಸರರಾದ ಬಾಡೂರು ಯಜಮಾನ ಕುಂಞಣ್ಣ ಭಂಡಾರಿ ಹಾಗೂ ಮೊಕ್ತೇಸರರಾದ ರವಿಶಂಕರ್ ಭಟ್ ಎಡಕಾನ, ದಿವಾಕರ ಶೆಟ್ಟಿ ಕುಡಾಲುಗುತ್ತು ಸ್ವಯಂಸೇವಕರನ್ನು ಅಭಿನಂದಿಸಿ ಶುಭ ಹಾರೈಸಿದರು. ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯದರ್ಶಿ ರಾಜಾರಾಮ ಶೆಟ್ಟಿ ಸ್ವಾಗತಿಸಿ.ಕುಡಾಲು ಶಿವಪ್ರಸಾದ ಶೆಟ್ಟಿ ವಂದಿಸಿದರು.
0 Comments