Ticker

6/recent/ticker-posts

ಪೆರ್ಲ ನಾಲಂದ ಕಾಲೇಜಿನಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ


ಪೆರ್ಲ: ಪೆರ್ಲ ನಾಲಂದ ಕಾಲೇಜಿನಲ್ಲಿ ವಿಶ್ವ ಕ್ಷಯರೋಗ ದಿನ ಆಚರಿಸಲಾಯಿತು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೆರ್ಲ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯಾಧಿಕಾರಿ ಹರೀಶ್ ಎಂ.ಎಸ್. ಕ್ಷಯರೋಗ ನಿರ್ಮೂಲನೆ ಹಾಗೂ ಜಾಗೃತಿ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕ್ಷಯರೋಗ ನಿರ್ಮೂಲನೆಯ ಪ್ರತಿಜ್ಞೆ ಸ್ವೀಕರಿಸಿದರು. ಸ್ವಯಂಸೇವಕಿ ಶ್ರೀಲಕ್ಷ್ಮೀ ಸ್ವಾಗತಿಸಿದರು. ಪೂಜಶ್ರೀ ವಂದಿಸಿದರು. ಛಾಯಶ್ರೀ ನಿರೂಪಿಸಿದರು.

Post a Comment

0 Comments