Ticker

6/recent/ticker-posts

ಮುಲ್ಕಿಯ ಆಟೋ ಚಾಲಕನನ್ನು ಕೊಲೆಗೈದು ಕುಂಜತ್ತೂರು ಪದವು ಬಳಿಯ ಬಾವಿಗೆಸೆದ ಪ್ರಕರಣ, ಇಬ್ಬರನ್ನು ಕಸ್ಟಡಿಗೆ ತೆಗೆದುಕೊಂಡ ಮಂಜೇಶ್ವರ ಪೊಲೀಸರು


 ಮಂಜೇಶ್ವರ: ಮುಲ್ಕಿ ಕೊಲ್ನಾಡು ನಿವಾಸಿ,ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ರನ್ನು  ಹತ್ಯೆಗೈದು ಮಂಜೇಶ್ವರ ಕುಂಜತ್ತೂರು ಪದವು ಬಳಿಯ ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮಂಜೇಶ್ವರ  ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಕೂಡಾ ಮಂಗಳೂರು ನಿವಾಸಿಗಳಾಗಿದ್ದಾರೆ.

ಬುದವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಮುಹಮ್ಮದ್ ಶರೀಫ್‌ ಅವರ ಮೃತದೇಹ ಗುರುವಾರ ರಾತ್ರಿ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿತ್ತು. ಅವರನ್ನು ಕೊಲೆಗೈದು ಬಾವಿಗೆ ಎಸೆದಿರುವುದು ಪೋಸ್ಟ್ ಮಾರ್ಟಂ  ಪರೀಕ್ಷೆಯಲ್ಲಿ ದೃಢಪಟ್ಟಿತ್ತು.


ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಮಂಜೇಶ್ವರ ಠಾಣಾ ಪೊಲೀಸರಿಗೆ ಮಂಗಳೂರಿನಿಂದ ಮೂವರು ಶರೀಫ್ ಅವರ ರಿಕ್ಷಾವನ್ನು ಬಾಡಿಗೆಗೆ ಪಡೆದು ತೆರಳಿದ್ದರು ಎಂಬ ಮಾಹಿತಿ ಲಭಿಸಿತ್ತು. ಶರೀಫ್‌ ಅವರ ಆಟೋ ರಿಕ್ಷಾ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಮಂಜೇಶ್ವರ ಕಡೆಗೆ ಬರುತ್ತಿರುವುದು ತಲಪಾಡಿ ಟೋಲ್ ಗೇಟಿನ ಸಿಸಿಟಿವಿ ಕ್ಯಾಮರಾದಲ್ಲೂ ಸೆರೆಯಾಗಿತ್ತು. ಈ ಎಲ್ಲಾ ಮಾಹಿತಿಗಳನ್ನು ಕೇಂದ್ರೀಕರಿಸಿ ತನಿಖೆ ಮುಂದುವರಿಸಿರುವ ಪೊಲೀಸರು ಇದೀಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ವಶಕ್ಕೆ ಪಡೆದವರ ಮಾಹಿತಿ ಲಭ್ಯವಾಗಿಲ್ಲ

Post a Comment

0 Comments