ಪೆರ್ಲ: ಶ್ರೀ ಶಾರದಾಂಬ ಪ್ರೌಢ ಶಾಲೆ ಶೇಣಿ ವಿದ್ಯಾಸಂಸ್ಥೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದಲ್ಲಿ 238 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿ ಶಾಲೆಗೆ ನೂರು ಶೇಕಡಾ ಫಲಿತಾಂಶ ತಂದಿದ್ದಾರೆ.15 ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಪಡೆದಿದ್ದು, 7 ವಿದ್ಯಾರ್ಥಿಗಳು 9A ಪ್ಲಸ್ ಪಡೆದಿದ್ದಾರೆ.
ಶಾಲಾ ಪ್ರಬಂಧಕರು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಮತ್ತು ಅಧ್ಯಾಪಕೇ ತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
0 Comments