Ticker

6/recent/ticker-posts

Ad Code

ಬಂಟ್ವಾಳ ಕೊಲೆ ಪ್ರಕರಣ, 15 ಮಂದಿಯ ವಿರುದ್ದ ಕೇಸು, ಆರೋಪಿಗಳ ಪತ್ತೆಗಾಗಿ ಪೊಲೀಸರ ಐದು ತಂಡ ರಚನೆ


 ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದ‌ರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣದ  ಆರೋಪಿಗಳ ಬಂಧನಕ್ಕಾಗಿ 5 ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ

ಡಿವೈಎಸ್ಪಿ ವಿಜಯ ಪ್ರಕಾಶ್‌ ನೇತೃತ್ವದಲ್ಲಿ 5 ಪೊಲೀಸ್ ತಂಡಗಳು ರಚಿಸಲಾಗಿದ್ದು, ಈಗಾಗಲೇ ಪ್ರಮುಖ ಆರೋಪಿಗಳಿಬ್ಬರ ಸಂಪೂರ್ಣ ಮಾಹಿತಿಗಳನ್ನು ಪೊಲೀಸರು ಕಲೆಹಾಕಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯರಾದ ದೀಪಕ್, ಸುಮಿತ್ ಸಹಿತ15 ಮಂದಿಯ ವಿರುದ್ದ ಪೊಲೀಸರು ಕೇಸು ದಾಖಲಿಸಿದ್ದಾರೆ

ಈಗಾಗಲೇ ಪೊಲೀಸ್ ಅಧಿಕಾರಿಗಳೊಂದಿಗೆ ಸದ್ಯ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದು, ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಡಿವೈಎಸ್ಪಿ ನೇತೃತ್ವದಲ್ಲಿ ಸಿಸಿಬಿ ಪೊಲೀಸ್‌ ನಿರೀಕ್ಷಕ ರಫೀಕ್ ಕೆ.ಎಂ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

Post a Comment

0 Comments