ತಿರುವನಂತಪುರಂ: ರಾಜ್ಯದಲ್ಲಿ ಅತಿ ತೀವ್ರ ಮಳೆ ಬರಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ ಉತ್ತರ ಕೇರಳದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ಕೋಜಿಕ್ಕೋಡ್, ವಯನಾಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ತೀವ್ರ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವಿವಿದೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕರಂದಕ್ಕಾಡು, ಚೆರ್ಕಳ ಎಂಬೆಡೆ ರಸ್ತೆಗೆ ಮರ ಬಿದ್ದಿದೆ. ಗ್ರಾಮೀಣ ಪ್ರದೇಶದ ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ. ರಸ್ತೆಯಲ್ಲಿ ವಾಹನಗಳ ಚಕ್ರ ಹೂತು ಹೋದ ಘಟನೆಯೂ ನಡೆದಿದೆ
0 Comments