Ticker

6/recent/ticker-posts

ಅಮೆರಿಕಾ ಮಧ್ಯಸ್ಥಿಕೆ, ಕದನ ವಿರಾಮಕ್ಕೆ ಭಾರತ, ಪಾಕಿಸ್ಥಾನ ಒಪ್ಪಿಗೆ


 ನವದೆಹಲಿ: ಅಮೆರಿಕಾದ ಮದ್ಯಸ್ಥಿಕೆಯ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ಕದನ ವಿರಾಮಕ್ಕೆ ಸಮ್ಮತಿ ಸೂಚಿಸಿದೆ. ಇದರಂತೆ ಇಂದು (ಶನಿವಾರ) ಸಾಯಂಕಾಲ 5 ಗಂಟೆಯ ನಂತರ ಗಡಿ ಪ್ರದೇಶಗಳು ಶಾಂತವಾಗಲಿದೆ.

ಮುಂದಿನ ಸೋಮವಾರದಂದು ಹಿರಿಯ ಸೇನಾ ಅಧಿಕಾರಿಗಳು ಪರಸ್ಪರ ಮಾತುಕತೆ ನಡೆಸಲಿದ್ದಾರೆ. ಭಾರತದ ವಿದೇಶಾಂಕ ಕಾರ್ಯದರ್ಶಿ ವಿಕ್ರಂ ಮಿಶ್ರಿ ಈ ಬಗ್ಗೆ ಹೇಳಿಕೆ  ನೀಡಿದ್ದಾರೆ. ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಇರಾಕ್ ಧರ್ ಸಹ ಇದೇ ರೀತಿಯ ಹೇಳಿಕೆ ನೀಡಿದ್ದಾರೆ.

   ಪಹಲ್ಗಾಂ ಭಯೋತ್ಪಾದಕ ದಾಳಿಯ ನಂತರ ಭಾರತವು ಆಪರೇಶನ್ ಸಿಂಧೂರ್ ಎಂಬ ಹೆಸರಿನಲ್ಲಿ ಪಾಕಿಸ್ಥಾನದ ಮೇಲೆ ವ್ಯಾಪಕ ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿಗಳ ನೇತೃತ್ವದಲ್ಲಿ ಶುಕ್ರವಾರ ರಾತ್ರಿಯಿಂದಲೇ ಮಾತುಕತೆ ನಡೆದಿತ್ತು. ಭಾರತ ಹಾಗೂ ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಎಕ್ಸ್ ಮೂಲಕ ತಿಳಿಸಿದ್ದಾರೆ

Post a Comment

0 Comments