Ticker

6/recent/ticker-posts

Ad Code

ಟೀಮ್ ಇಂಡಿಯಾಕ್ಕೆ ಮತ್ತೊಂದು ಆಘಾತ: ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಕೊಹ್ಲಿ


 ಮುಂಬೈ: ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ನಿವೃತ್ತಿ ಹೇಳಿದ ಬೆನ್ನಲ್ಲೇ ಇದೀಗ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ಕೂಡ ಟೆಸ್ಟ್ ಕ್ರಿಕೆಟ್‌ ಗೆ ವಿದಾಯ ಹೇಳಿದ್ದರು ಮತ್ತು ಈಗ ವಿರಾಟ್ ಕೊಹ್ಲಿ ಕೂಡ ರೆಡ್ ಬಾಲ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವುದನ್ನು ಅಧಿಕೃತವಾಗಿ ದೃಢಪಡಿಸಿದ್ದಾರೆ. ಅವರು ಇನ್ಸಾಗ್ರಾಮ್ ನಲ್ಲಿ ತಮ್ಮ ಟೆಸ್ಟ್ ನಿವೃತ್ತಿಯನ್ನು ಘೋಷಿಸಿದರು. ವಿರಾಟ್ ಮತ್ತು ರೋಹಿತ್ ಕೂಡ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಒಟ್ಟಿಗೆ ನಿವೃತ್ತಿ ಘೋಷಣೆ ಮಾಡಿದಂತಾಗಿದೆ.

ಈ ಕುರಿತು ಇನ್ಸಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಿದ ವಿರಾಟ್ 269 ಸೈನ್ ಆಫ್ ಎಂದು ಪೋಸ್ಟ್ ಮಾಡಿದ್ದಾರೆ .

Post a Comment

0 Comments