Ticker

6/recent/ticker-posts

ಪಕ್ಷದ ಶಿಸ್ತು ಉಲ್ಲಂಘನೆ, ಕರ್ಣಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರ ಉಚ್ಚಾಟನೆ


 ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ಜನತಾ ಪಾರ್ಟಿಯು ಯಶವಂತಪುರ ಕ್ಷೇತ್ರದ ಶಾಸಕ ಎಸ್. ಟಿ. ಸೋಮಶೇಖ‌ರ್ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿರುವುದಾಗಿ ಮಂಗಳವಾರ ಪ್ರಕಟಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಕೇಂದ್ರ ಶಿಸ್ತು ಸಮಿತಿ, 2025 ರ ಮಾರ್ಚ್25 ರಂದು ನೋಟಿಸ್‌ ನೀಡಲಾಗಿದ್ದರೂ ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಈಗ ಹೊಂದಿರುವ ಪಕ್ಷದ ಎಲ್ಲ ಹುದ್ದೆಗಳಿಂದ ತೆಗೆದುಹಾಕಲಾಗಿದೆ' ಎಂದು ಹೆಬ್ಬಾ‌ರ್ ಮತ್ತು ಸೋಮಶೇಖರ್‌ಗೆ ನೋಟಿಸ್‌ ನೀಡಿದೆ.

Post a Comment

0 Comments