Ticker

6/recent/ticker-posts

Ad Code

ಬಂಟ್ವಾಳ ಕೊಲೆ ಪ್ರಕರಣ, ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಲ್ಲಿ ನಿಷೇದಾಜ್ಞೆ ಜಾರಿ


 ಮಂಗಳೂರು:  ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ನಂತರ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನಗಳ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು  ಯುವಕರ ಮೇಲೆ ಇಂದು (ಮಂಗಳವಾರ) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ದಾಳಿಯಲ್ಲಿ ಗಂಭೀರ ಗಾಯಗೊಂಡ ಕೊಳತ್ತಮಜಲು ನಿವಾಸಿ ರಹೀಮ್  ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Post a Comment

0 Comments