Ticker

6/recent/ticker-posts

ಪೆರ್ಲ ನಾಲಂದ ಕಾಲೇಜಿನಲ್ಲಿ ಮಾದಕ ವಸ್ತು ಮುಕ್ತ ಕೇರಳ ಪ್ರತಿಜ್ಞೆ ಬೋಧನೆ


ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮುಕ್ತ ಕೇರಳ ಪ್ರತಿಜ್ಞೆ ಬೋಧಿಸಲಾಯಿತು. 


ಪೆರ್ಲ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಹರೀಶ್ ಎಂ.ಎಸ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾದಕ ವಸ್ತು ಬಳಕೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿದರು. ಪ್ರಿನ್ಸಿಪಾಲ್ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಸ್ವಯಂಸೇವಕಿ ಪ್ರಾರ್ಥನಾ ಸಾಗತಿಸಿದರು. ಅನಘಾ ವಂದಿಸಿದರು. ಶ್ರೀಲಕ್ಷ್ಮಿ ನಿರೂಪಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ನೇತೃತ್ವ ವಹಿಸಿದ್ದರು.

Post a Comment

0 Comments