ಪೆರ್ಲ : ಶೇಣಿ ಶ್ರೀಶಾರದಾಂಬ ಪ್ರೌಢಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷ ಆರಂಭದ ಪ್ರವೇಶೋತ್ಸವ ಮತ್ತು ಕಳೆದ ಎಸ್ಸಸ್ಸೆಲ್ಸಿ ಪರೀಕ್ಷೆಯಲ್ಲಿ ಎಪ್ಲಸ್ ಮಾರ್ಕ್ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ವತಿಯಿಂದ ಅಭಿನಂದಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಲ್ಸನ್ ಡಿಸೋಜ, ಉಪಾಧ್ಯಕ್ಷ ಉಮ್ಮರ್ ಕಂಗಿನಮೂಲೆ, ನಿಕಟಪೂರ್ವ ಅಧ್ಯಕ್ಷ ಮೊಯ್ದಿನ್ ಕುಟ್ಟಿ, ಮಾತೃ ಸಂಘದ ಅಧ್ಯಕ್ಷೆ ಪುಷ್ಪಾ ಮೊದಲಾದವರು ಭಾಗವಹಿಸಿದ್ದರು.
0 Comments