Ticker

6/recent/ticker-posts

ಆತ್ಮಹತ್ಯೆಗೆ ಯತ್ನಿಸಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಯುವತಿ‌ ಮೃತ್ಯು


 ಕಾಸರಗೋಡು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 17 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಮೇಲ್ಪರಂಬ ಪೊಲೀಸ್ ಠಾಣಾ ವ್ಯಾಪ್ತಿಯ ಅರಮಂಗಾನಂ ಸುಮಲತರ ಪುತ್ರಿ ರಂಜಿನಿ, ಮಂಗಳವಾರ ರಾತ್ರಿ ವಯನಾಡ್ ಮೂಪನ್ಸ್ ಮೆಡಿಕಲ್ ಕಾಲೇಜಿನಲ್ಲಿ ಕೊನೆಯುಸಿರೆಳೆದಳು.  ಮೇಲ್ಪರಂಬ ಪೊಲೀಸರು ಕೇಸು ದಾಖಲಿಸಿದರು. ಎಪ್ರಿಲ್ 28 ರಂದು ರಾತ್ರಿ  ಮನೆಯ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿನಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು ಕಾಸರಗೋಡು ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆಕೆಯ ಸ್ಥಿತಿ ಚಿಂತಾಜನಕವಾದ ಹಿನ್ನೆಲೆಯಲ್ಲಿ  ಆಕೆಯನ್ನು ‌ಮಂಗಳೂರು, ಅನಂತರ ಕಣ್ಣೂರು ಆಸ್ಪತ್ರೆಗಳಿಗೆ ಕೊಂಡೊಯ್ಯಲಾಯಿತು. ಅನಂತರ ಡಾಕ್ಟರುಗಳ ಆದೇಶದಂತೆ ವಯನಾಡ್ ಮೆಡಿಕಲ್ ಕಾಲೇಜಿಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದ ಹಿನ್ನೆಲೆಯಲ್ಲಿ ಆಕೆ ಕೊನೆಯುಸಿರೆಳೆದಳು.

Post a Comment

0 Comments