Ticker

6/recent/ticker-posts

ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ 38ನೇ ಎಡನೀರು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


 ಎಡನೀರು:  38ನೇ ಎಡನೀರು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ ಶ್ರೀಮಠದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಖ್ಯಾತ ಯಕ್ಷಗಾನ ಕಲಾವಿದರಾದ ಉಜಿರೆ ಶ್ರೀ ಅಶೋಕ್ ಭಟ್, ಎಡನೀರು ಮಠದ ವ್ಯವಸ್ಥಾಪಕರಾದ ಶ್ರೀ ರಾಜೇಂದ್ರ ಕಲ್ಲೂರಾಯ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ ಮಾಧವ ಹೇರಳ ಕಳೇರಿ ಉತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಈ ಶಾಂತ ಟೀಚರ್, ಮಾತೃ ಸಮಿತಿ ಅಧ್ಯಕ್ಷರಾದ ಶ್ರೀಮತಿ ಪ್ರಭಾ ಕಲ್ಲೂರಾಯ ಹಾಗೂ ಸಮಿತಿಯ ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.

Post a Comment

0 Comments