Ticker

6/recent/ticker-posts

ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವೈದ್ಯರ ದಿನಾಚರಣೆ



ಮೀಯಪದವು: ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ವೈದ್ಯರು ಅಹರ್ನಿಶಿ ದುಡಿಯುತ್ತಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ಅವರ ಕೊಡುಗೆ ಅನುಪಮವಾದುದು ಎಂದು ಮೀಂಜ ಗ್ರಾಮ ಪಂಚಾಯತು ಅಧ್ಯಕ್ಷರಾದ ಶ್ರೀಮತಿ. ಸುಂದರಿ. ಆರ್. ಶೆಟ್ಟಿ ಅಭಿಪ್ರಾಯಪಟ್ಟರು. ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಂಜೇಶ್ವರ ಸರಕಾರಿ ಆಸ್ಪತ್ರೆಯ ವೈದ್ಯರಾದ ಡಾ. ಪ್ರಭಾಕರ ರೈ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಗೌರವನ್ನು ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಆರೋಗ್ಯಪೂರ್ಣ ಹವ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶವನ್ನು ಉನ್ನತ ಮಟ್ಟದ ಗುರಿಯೆಡೆಗೆ ಕೊಂಡೊಯ್ಯಬೇಕು ಎಂದರು. ಶಾಲಾ ಸಂಚಾಲಕರಾದ ಡಾ. ಜಯಪ್ರಕಾಶ ನಾರಾಯಣ ತೊಟ್ಟಿತ್ತೋಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ. ಮೃದುಲ. ಕೆ. ಎಂ. ಶ್ರೀ ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ. ಅರವಿಂದಾಕ್ಷ ಭಂಡಾರಿ, ಪಿ.ಟಿ.ಎ ಅಧ್ಯಕ್ಷರಾದ ಶ್ರೀ. ಇಬ್ರಾಹಿಂ ಹೊನ್ನಕಟ್ಟೆ, ಅಧ್ಯಾಪಕರಾದ ಶ್ರೀ. ರವಿಲೋಚನ. ಸಿ. ಎಚ್, ಮಂಜೇಶ್ವರ ಸರಕಾರಿ ಆಸ್ಪತ್ರೆಯ ಆರೋಗ್ಯ ಮೇಲ್ವಿಚಾರಕರಾದ ಶ್ರೀ. ದಿಲೀಪ್ ಶುಭಾಶಂಸನೆಗೈದರು. ಪ್ರಾಂಶುಪಾಲರಾದ ಶ್ರೀ. ರಮೇಶ್. ಕೆ. ಎನ್ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕರಾದ ಶ್ರೀ. ರಾಜೇಂದ್ರನ್. ಕೆ. ಪಿ ವಂದಿಸಿದರು, ಹರೀಶ. ಜಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು.

Post a Comment

0 Comments