Ticker

6/recent/ticker-posts

ವ್ಯಾಸ ಪೂಜೆಯೊಂದಿಗೆ ಎಡನೀರು ಶ್ರೀಗಳ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ಆರಂಭ


 ಕಾಸರಗೋಡು :  ಜಗದ್ಗುರು ಶಂಕರಾಚಾರ್ಯ ಸಂಸ್ಥಾನಮ್ ಶ್ರೀ ಎಡನೀರು ಮಠದಲ್ಲಿ  ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆಯು ವಿಶ್ವಾವಸು ನಾಮ ಸಂವತ್ಸರದ ಗುರುಪೂರ್ಣಿಮೆಯ ಪುಣ್ಯ ದಿನದಂದು ಆರಂಭಗೊಂಡಿತು. 


ಇದರ ಅಂಗವಾಗಿ ಶ್ರೀಮಠದಲ್ಲಿ  ಬೆಳಗ್ಗೆ ವ್ಯಾಸಪೂಜೆಯೊಂದಿಗೆ ಚಾತುರ್ಮಾಸ್ಯ ವ್ರತ ಸಂಕಲ್ಪ ಹೋಮಗಳು ನೆರವೇರಿತು. ಎಡನೀರು ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ಮಂಡಳಿಯಿಂದ


60 ದಿನಗಳ ಭಜನಾ ಕಾರ್ಯಕ್ರಮಕ್ಕೆ  ಚಾಲನೆ ನೀಡಲಾಯಿತು. ಪೂರ್ವಾಹ್ನ  ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಮತ್ತು ಬಳಗದವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ ಜರಗಿತು. ಮಠದ ಅಭಿಮಾನಿ‌ ಭಕ್ತರು ಶ್ರದ್ಧಾ ಭಕ್ತಿಯಿಂದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಸೆಪ್ಟೆಂಬರ್ 7ರ ತನಕ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.

ಚಿತ್ರ : ಶ್ಯಾಮ್ ಪ್ರಸಾದ್ ಕುಂಚಿನಡ್ಕ

Post a Comment

0 Comments