ಪೆರ್ಲ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸಹ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಬಜಕೂಡ್ಲಿನ ಈಶ ವನದಲ್ಲಿ ಜರಗಿತು.
ಜನ ಜಾಗೃತಿ ವಲಯಾಧ್ಯಕ್ಷ ಬಿ.ಪಿ.ಶೇಣಿ ಉದ್ಘಾಟಿಸಿದರು. ಎಣ್ಮಕಜೆ ಗ್ರಾ.ಪಂ.ಸದಸ್ಯೆ ಉಷಾ ಗಣೇಶ್, ಮಾಜಿ ಅಧ್ಯಕ್ಷೆ ಪುಷ್ಪಾ ಅಮೆಕ್ಕಳ, ಟಿ. ಪ್ರಸಾದ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸುರೇಂದ್ರ ಬಿ ಮೊದಲಾದವರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ರೇಖಾ ಜ್ಯೋತಿ ಸ್ವಾಗತಿಸಿ ಸೇವಾ ಪ್ರತಿನಿಧಿ ಲತಾ ವಂದಿಸಿದರು. ಕೃಷಿ ಮೇಲ್ವಿಚಾರಕಿ ಪ್ರಿಯಾ ನಿರೂಪಿಸಿದರು.
0 Comments