Ticker

6/recent/ticker-posts

ಪೆರ್ಲ ನಾಲಂದ ಕಾಲೇಜಿನಲ್ಲಿ ರಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮ


 ಪೆರ್ಲ: ಪೆರ್ಲ ನಾಲಂದ ಕಾಲೇಜು, ನಾಲಂದ ಚಾರಿಟೇಬಲ್ ಟ್ರಸ್ಟ್, ಕಾಲೇಜು ಎನ್ನೆಸ್ಸೆಸ್  ಘಟಕ ಮತ್ತು ಐಕ್ಯೂಎಸಿ  ಸಹಯೋಗದಲ್ಲಿ ರಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.  ಬದಿಯಡ್ಕ ಪೊಲೀಸ್ ಠಾಣೆಯ ಜನಮೈತ್ರಿ ಬೀಟ್ ಪೊಲೀಸ್ ಅಧಿಕಾರಿ ಶೀನು ಎ.ವಿ.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ರಾಗಿಂಗ್ ನಿಂದ ವಿದ್ಯಾರ್ಥಿಗಳು ಎದುರಿಸುವ ತೊಂದರೆಗಳು ಮತ್ತು ಕಾನೂನು ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಪ್ರಿನ್ಸಿಪಾಲ್ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ., ಐಕ್ಯೂಎಸಿ ಸಂಯೋಜಕಿ ನಯನ, ಉಪನ್ಯಾಸಕರು, ಸಿಬ್ಬಂದಿ ಉಪಸ್ಥಿತರಿದ್ದರು. ಮಲಯಾಳಂ ವಿಭಾಗದ ಉಪನ್ಯಾಸಕಿ ವಿನೀಶ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಅಶ್ವಿನಿ ವಂದಿಸಿದರು.

Post a Comment

0 Comments