Ticker

6/recent/ticker-posts

ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ


ಉಪ್ಪಳ : ಭಾರತೀಯ ಸೇನೆಯ ವೀರಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸಿ ಅವರನ್ನು ಗೌರವಿಸಲು ಹಾಗೂ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿಯನ್ನರ್ಪಿಸಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಮನೋಭಾವನೆ ಬೆಳೆಸುವ ಉದ್ದೇಶದಿಂದ ಪ್ರಶಾಂತಿ ವಿದ್ಯಾಕೇಂದ್ರ, ಬಾಯಾರು ಮತ್ತು ಇಲ್ಲಿನ ಸಮಾಜ ವಿಜ್ಞಾನ ಸಂಘ ‘ಸಮಷ್ಟಿ’ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಶ್ರೀ ಸುರೇಶ್ ಕೆ. ಸೇನೆಯಲ್ಲಿನ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುತ್ತಾ, ರಾಷ್ಟ್ರ ಸೇವೆಯ ಮಹತ್ತ್ವವನ್ನು ವಿವರಿಸಿದರು. ಪ್ರತಿಯೊಬ್ಬರು ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ಈ ಸಂದರ್ಭದಲ್ಲಿ ಅವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಸಮಾಜ ವಿಜ್ಞಾನ ಶಿಕ್ಷಕಿ ಜ್ಯೋತಿಲಕ್ಷ್ಮಿ ಹಾಗೂ ವಿದ್ಯಾರ್ಥಿ ಆದಿತ್ಯ ಐ.ಜಿ. ಕಾರ್ಯಕ್ರಮದ ಔಚಿತ್ಯದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಪ್ರಶಾಂತಿ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷರಾದ ಪೆಲತಡ್ಕ ಶ್ರೀ ರಾಮಕೃಷ್ಣ ಭಟ್, ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಹಿರಣ್ಯ ಮಹಾಲಿಂಗ ಭಟ್, ಪ್ರಾಂಶುಪಾಲರಾದ ಶ್ರೀ ವಾಮನನ್, ಶಾಲಾ ಮಾರ್ಗದರ್ಶಕರಾದ ಶ್ರೀ ಕೆ. ಕೃಷ್ಣ ನಾಯಕ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಶ್ರೀಧರ್ ಸೊದ್ದಿ ಅತಿಥಿಗಳನ್ನು ಸ್ವಾಗತಿಸಿ, ಅತುಲ್ ಯು. ವಂದಿಸಿದರು. ಮಿನು ಮರಿಯಮ್ ಮತ್ತು ಫಾತಿಮತ್ ಶಬೀಬಾ ಕಾರ್ಯಕ್ರಮ ನಿರ್ವಹಿಸಿದರು.

Post a Comment

0 Comments