ಮಂಗಳೂರು: ಕಲಾಸಂಗಮದ ಹಿರಿಯ ಕಲಾವಿದ , ಚಲನಚಿತ್ರನಟ ರಮೇಶ್ ಕಲ್ಲಡ್ಕ ( 68 ) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.
ರಂಗಭೂಮಿಯಲ್ಲಿ 30 ವರ್ಷಕ್ಕೂ ಮಿಕ್ಕಿ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ರವರ ಗರಡಿಯಲ್ಲಿ ಪಳಗಿದ ರಮೇಶ್ ಕಲ್ಲಡ್ಕ ಕಲಾಸಂಗಮದ ಎಲ್ಲಾ ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಅದರಲ್ಲೂ "ಶಿವದೂತಗುಳಿಗೆ" ನಾಟಕದ ಭೀಮಾರಾವ್ ಪಾತ್ರ ಅವರಿಗೆ ಹೆಸರನ್ನು, ಹೊಸ ಇಮೇಜನ್ನು ತಂದು ಕೊಟ್ಟಿದೆ. ಶಿವಾಜಿ ನಾಟಕದಲ್ಲೂ ಅವರು ನಿರ್ವಹಿಸಿದ ದಾದ ಕೊಂಡೆಯ ಪಾತ್ರ ಗಮನ ಸಳೆದಿತ್ತು.
ಸರಳ ಸೌಮ್ಯಸ್ವಭಾವದ ರಮೇಶ್ ಕಲ್ಲಡ್ಕ ಅವರು ರಂಗಭೂಮಿಯಲ್ಲಿ ಶಿಸ್ತಿನ ಕಲಾವಿದರಾಗಿದ್ದರು.
ಕಲಾಸಂಗಮದ ಮೂಲಕ ಮುಂಬೈ, ಬೆಂಗಳೂರು ಸಹಿತ ಬೇರೆ ಬೇರೆ ಊರುಗಳಲ್ಲಿ ನಾಟಕ ಪ್ರದರ್ಶನ ನೀಡಿದ್ದರು.
ರಮೇಶ್ ಕಲ್ಲಡ್ಕ ಅವರ ನಿಧನ ತುಳುರಂಗಭೂಮಿಗೆ ತುಂಬಲಾರದ ನಷ್ಟ ಎಂದು ಸಂತಾಪ ವ್ಯಕ್ತಪಡಿಸಲಾಗಿದೆ
0 Comments