ಕಾಸರಗೋಡು: ಬದಿಯಡ್ಕ, ಮಂಜೇಶ್ವರ ಪೊಲೀಸ್ ಠಾಣೆಗಳಲ್ಲಿ ಎರಡು ಪೋಕ್ಸೊ ಪ್ರಕರಣ, ಒಂದು ಅತ್ಯಾಚಾರ ಪ್ರಕರಣವನ್ನು ದಾಖಲಿಸಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. 16 ವರ್ಷದ ಬಾಲಕಿಯನ್ನು ಮದುವೆ ಮಾಡುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಉಳ್ಳೋಡಿ ನಿವಾಸಿಯನ್ನು ಬಂಧಿಸಲಾಗಿದೆ. ಉಳ್ಳೋಡಿ ನಿವಾಸಿ ಶಶಿಧರ(38) ಬಂಧಿತ ಆರೋಪಿ. ಇದೇ ಯುವತಿಯನ್ನು 18 ವರ್ಷದ ನಂತರವೂ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ 'ಅತ್ಯಾಚಾರ' ಪ್ರಕರಣವನ್ನು ಸಹ ದಾಖಲಿಸಲಾಗಿದೆ.
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿ ಗರ್ಭಿಣಿಯಾದ ಪ್ರಕರಣದಲ್ಲಿ ಮುಹಮ್ಮದ್ ಶರೀಫ್ ಎಂಬಾತನ ವಿರುದ್ದ ಪೊಲೀಸರು ಪೋಕ್ಸೊ ಕಾಯ್ದೆಯಂತೆ ಕೇಸು ದಾಖಲಿಸಿದ್ದಾರೆ. ಬಾಲಕಿ ಗರ್ಭಿಣಿಯಾದನೆಂದು ತಿಳಿದ ನಂತರ ಮುಹಮ್ಮದ್ ಶರೀಫ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ
0 Comments