ಕಾಸರಗೋಡು : ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೇತೃತ್ವದಲ್ಲಿ ಸೆ.14ರಿಂದ 21ರ ವರೆಗೆ ಧರ್ಮಸ್ಥಳದಲ್ಲಿ ಜರಗಲಿರುವ 27ನೇ ವರುಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿ ಜರಗಿತು.
ಸಭೆಯನ್ನು ಧ.ಗ್ರಾ.ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಉದ್ಘಾಟಿಸಿದರು. ಪರಿಷತ್ ಕಾಸರಗೋಡು ವಲಯ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಭಜನಾ ಪರಿಷತ್ ಗೌರವಧ್ಯಕ್ಷರಾದ ಶ್ರೀ ಜಯಾನಂದ ಕುಮಾರ್ ಹೊಸದುರ್ಗ ಭಜನೆಯ ಮಹತ್ವದ ಬಗ್ಗೆ ವಿಷಯ ವ್ಯಕ್ತಪಡಿಸಿದರು. ಭಜನಾ ಪರಿಷತ್ ಜಿಲ್ಲಾ ಸಮನ್ವಯ ಅಧಿಕಾರಿ ಸಂತೋಷ್ ಪೂಜಾರಿ ಪ್ರಾಸ್ತವನೆಗೈದರು. ಪೇಟೆ ವೆಂಕಟರಮಣ ಬಾಲಗೋಕುಲದ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಯೋಜನಾಧಿಕಾರಿ ದಿನೇಶ್ ಸ್ವಾಗತಿಸಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸೌಮ್ಯ ವಂದಿಸಿದರು.
0 Comments