ನವದೆಹಲಿ: ದೇಶದ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆಯು ಸೆಪ್ಟೆಂಬರ್ 9ರಂದು ನಡೆಯಲಿದೆ. ಆಗಸ್ಟ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 21ರವರೆಗೆ ಅವಕಾಶವಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆಯಲ್ಲಿ ತಿಳಿಸಿದೆ.ಆಗಸ್ಟ್ 22ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಆಗಸ್ಟ್ 25 ಆಗಿದೆ. ಮತದಾನ ಸೆಪ್ಟೆಂಬರ್ 9ರಂದು ನಡೆಯಲಿದ್ದು ಅದೇ ದಿನ ಎಣಿಕೆ ನಡೆಯಲಿದೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕ ಸಭೆಯ 543 ಸಂಸದರು ಸಹಿತ 788 ಮಂದಿಗೆ ಮತದಾನದ ಅವಕಾಶವಿದೆ. ಅನಾರೋಗ್ಯದ ಕಾರಣ ಜುಲೈ 22 ರಂದು ಉಪರಾಷ್ಟ್ರಪತಿ ಜಗದೀಪ್ ಧಂಖರ್ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತದೆ.
0 Comments