ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಆಗಸ್ಟ್ 27ರಂದು ಜರಗಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರದಲ್ಲಿ ನಿನ್ನೆ ನಡೆದ ಆಟಿ ತಿಂಗಳ ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ರಾಧಾಕೃಷ್ಣ ರೈ ಕಾರ್ಮಾರು, ಸೇವಾ ಸಮಿತಿ ಅಧ್ಯಕ್ಷರಾದ ಶ್ರೀಕೃಷ್ಣ ಭಟ್ ಪುದುಕೋಳಿ, ಮಹೇಶ್ ವಳಕುಂಜ, ನರಸಿಂಹ ಭಟ್ ಕಾರ್ಮಾರು, ರಾಮ ಕಾರ್ಮಾರು ರಂಜಿತ್ ಯಾದವ್, ರಾಜೇಶ್ ಕಾರ್ಮಾರು ಮೊದಲಾದವರು ಉಪಸ್ಥಿತರಿದ್ದರು.
ಕಾರ್ಮಾರಿನಲ್ಲಿ ಮೊದಲ ಬಾರಿಗೆ ಗಣೇಶೋತ್ಸವದ ಅಂಗವಾಗಿ ಗಣಪತಿ ದೇವರ ಪ್ರತಿಷ್ಠಾಪನೆಗೈದು ನಡೆಸುವ ಚೌತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಯಿತು. ಯುವಕ ವೃಂದದ ಅಧ್ಯಕ್ಷರಾದ ವಿಜಯ್ ಕುಮಾರ್ ಮಾನ್ಯ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ಗೋಕುಲ ಶರ್ಮ ವಂದಿಸಿದರು.
0 Comments