Ticker

6/recent/ticker-posts

Ad Code

ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ


 ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಕಾರ್ಯಕರ್ತ ರಾಜೀವ್ ಕುಲಾಲ್ ಎಂಬವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರಿಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದೆ.

Post a Comment

0 Comments