ತಿರುವನಂತಪುರಂ: ಮಹಿಳೆಯರಿಗೆ ಅಶ್ಲೀಲ ಸಂದೇಶ ಸಹಿತ ವಿವಾದಗಳಲ್ಲಿ ಸಿಲುಕಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕುಟತ್ತಿಲ್ ರನ್ನು ಕಾಂಗ್ರೆಸ್ ಪಕ್ಷದಿಂದ ಸಸ್ಪೆಂಡ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಸಸ್ಪೆಂಡ್ ಮಾಡಲಾಗಿದೆಯೆಂದು ಪಕ್ಷದ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಅವರು ಶಾಸಕ ಹುದ್ದೆಗೆ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮೂಲಕಗಳು ತಿಳಿಸಿವೆ.
ರಾಹುಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪಕ್ಷದಲ್ಲಿ ಒತ್ತಡ ಉಂಟಾಗಿತ್ತು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲಿ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ಇದು ಪಕ್ಷಕ್ಕೆ ತಿರುಗೇಟಾಗುವ ಸಾಧ್ಯತೆ ಇದೆ ಎಂಬುದು ಕಾಂಗ್ರೆಸ್ ಲೆಕ್ಕಾಚಾರ. ಯುವನಟಿ ರಿನಿ ಆನ್ ಸಹಿತ ಹಲವರಿಗೆ ಅಶ್ಲೀಲ ಸಂದೇಶ, ಲೈಂಗಿಕ ಕಿರುಕುಳ ನೀಡಲಾಗಿದೆಯೆಂದು ರಾಹುಲ್ ವಿರುದ್ದ ಆರೋಪ ಉಂಟಾಗಿತ್ತು
0 Comments