ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಬ್ರಾಂಡ್ ನೀಡಿ ಪ್ರಖ್ಯಾತರಾದ ಪಿಲಿ ರಾಧಣ್ಣ (ರಾಧಾಕೃಷ್ಣ ಶೆಟ್ಡಿ ಕೆಮ್ಮಾಯಿ) ಇಂದು (ಶನಿವಾರ) ಮುಂಜಾನೆ ನಸುಕಿನ ಜಾವ ನಿಧನರಾದರು. ಅನಾರೋಗ್ಯದಿಂದಾಗಿ ಅವರನ್ನು ನಿನ್ನೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಧೆ ಚಿಕಿತ್ಸೆಗೆ ಸ್ಪಂಧಿಸದೆ ಅವರಯ ಇಂದು ಮುಂಜಾನೆ ನಿಧನರಾದರು. ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ ಹಾಗೆ ವೇಷ ಹಾಕುವುದು ಮತ್ತು ಕುಣಿಯುವುದು ಅವರ ವಿಶೇಷವಾಗಿತ್ತು.
. ರಾಧಾಕೃಷ್ಣಶೆಟ್ಟಿ ಅವರಿಗೆ 9 ವರ್ಷ (4ನೇ ತರಗತಿ) ಇರುವಾಗ ತಂದೆ ಸಂಕಪ್ಪ ಅವರು ಕಿನ್ನಿಪಿಲಿ ವೇಷಧಾರಿಯಾಗಿ ಸೇರಿಸಿಕೊಂಡರು.
ಅಲ್ಲಿಂದ ಪಿಲಿ ವೇಷ ಶುರುವಾಗಿ ಅಪ್ಪ-ಮಗ ಇಬ್ಬರು 10 ವರ್ಷಗಳ ಕಾಲ ಜತೆ ಜತೆಯಾಗಿ ಹೆಜ್ಜೆ ಹಾಕಿದರು. ಕಿನ್ನಿ ಪಿಲಿಯಾಗಿ ಟೋಪಿ ಹಾಕಿಕೊಂಡು ಹೊರಟ ಪುಟ್ಟ ಬಾಲಕ ಮುಂದೆ ಪಿಲಿ ರಾಧಣ್ಣ ಆಗಿ ಗುರುತಿಸಿಕೊ೦ಡರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗು ಪುತ್ರಿಯನ್ನು ಅಗಲಿದ್ದಾರೆ.


0 Comments