Ticker

6/recent/ticker-posts

Ad Code

ಶೇಣಿ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ


ಪೆರ್ಲ : ಜಿಲ್ಲಾ ಗಣಿತ ಮೇಳ ಹಾಗೂ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ಶೇಣಿ ಶ್ರೀ ಶಾರದಾಂಬ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಸರಗೋಡಿನ 

ಬಿಇಎಂ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಕಾಸರಗೋಡು ಜಿಲ್ಲಾಮಟ್ಟದ ಗಣಿತ ಮೇಳದಲ್ಲಿ ಗಣಿತ ಪ್ರತಿಭಾನ್ವೇಷಣಾ  ಸ್ಪರ್ಧೆಯಲ್ಲಿ, ಭಾಗವಹಿಸಿ ಇಝ ಫಾತಿಮಾ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ  . 

ನೀಲೇಶ್ವರಂನ ಸರಕಾರಿ ಹೈಯರ್ ಸೆಕೆಂಡರಿ ಶಾಲೆ ಕಕ್ಕಾಡಿನಲ್ಲಿ ನಡೆದ ಕಾಸರಗೋಡು ಜಿಲ್ಲಾಮಟ್ಟದ ಸಮಾಜ ವಿಜ್ಞಾನ ಮೇಳದಲ್ಲಿ ಭೂಪಟ ತಯಾರಿ ಸ್ಪರ್ಧೆಯಲ್ಲಿ, ಭಾಗವಹಿಸಿ ತೃಪ್ತಿ ಎನ್, ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ  . ಇವರಿಬ್ಬರು ಶೇಣಿ ಶ್ರೀ ಶಾರದಾಂಬ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಗಳು.

Post a Comment

0 Comments