ಪೆರ್ಲ: ರಾಜ್ಯ ಪ್ರತಿಪಕ್ಷ ನಾಯಕ ವಿ.ಡಿ. ಸತೀಶನ್ ಅ.14ರಂದು ಪೆರ್ಲಕ್ಕೆ ಆಗ ಮಿಸುವರು. ಬೆಳಗ್ಗೆ 9ಕ್ಕೆ ಪೆರ್ಲ ಪೇಟೆಯಲ್ಲಿ ನಡೆಯುವ ಸಮಾರಂಭದಲ್ಲಿ ಎಣ್ಮಕಜೆ ಗ್ರಾ.ಪಂ. ವತಿಯಿಂದ ನಿರ್ಮಿಸಿದ ಮಹಿಳಾ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸುವರು. ಬಳಿಕ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸು ವರು. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅಧ್ಯಕ್ಷತೆ ವಹಿಸುವರು. ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿರುವರು. ಎಣ್ಮಕಜೆ ಗ್ರಾ.ಪಂ. ಅಧ್ಯಕ್ಷ ಸೋಮಶೇಖರ್ ಜೆ.ಎಸ್., ಬ್ಲಾಕ್, ಗ್ರಾಪಂ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಭಾಗವಹಿಸುವರು.
0 Comments