Ticker

6/recent/ticker-posts

Ad Code

ನರ್ಸಿಂಗ್ ವಿದ್ಯಾರ್ಥಿನಿಯ ಮೃತದೇಹ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ


 ಕಾಸರಗೋಡು: ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಯುವತಿಯ ಮೃತದೇಹ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೇಡಗಂ ಪೊಲೀಸ್ ಠಾಣಾ ವ್ಯಾಪ್ತಿಯ ಬೇತೂರುಪಾರ ತಚ್ಚರಕುಂಡ್ ನಿವಾಸಿ ಬಾಬು ಎಂಬವರ ಪುತ್ರಿ ಮಹಿಮ(20) ಮೃತಪಟ್ಟವಳು. ಇಂದು (ಬುದವಾರ) ಬೆಳಗ್ಗೆ 7.30 ರ   ವೇಳೆ  ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದು ಕೂಡಲೇ ಹಗ್ಗ ತುಂಡರಿಸಿ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲಾಗಲಿಲ್ಲ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಈಕೆ ಆತ್ಮಹತ್ಯೆ ಮಾಡಲು ಕಾರಣವೇನೆಂದು ತಿಳಿದು ಬಂದಿಲ್ಲ. ಬೇಡಗಂ ಪೊಲೀಸರು ಕೇಸು ದಾಖಲಿಸಿದರು. ಇದೇ ವೇಳೆ ಮಹಿಮಳನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು ಇನ್ನೊಂದು ವಾಹನದಲ್ಲಿ ಕೊಂಡೊಯ್ಯಲಾಗಿತ್ತು. ಮೃತಳು ತಾಯಿ ವನಜ, ಸಹೋದರ ಮಹೇಶ್ ಎಂಬಿವರನ್ನು ಅಗಲಿದ್ದಾರೆ.



Post a Comment

0 Comments