Ticker

6/recent/ticker-posts

Ad Code

ಅಂಧರ ಟಿ20 ವಿಶ್ವಕಪ್ ಭಾರತದ ಮಹಿಳಾ ಕ್ರಿಕೆಟ್ ತಂಡದ ಮಡಿಲಿಗೆ


 ಕೊಲಂಬೋ: ಇದೇ ಮೊದಲ ಬಾರಿಗೆ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಭಾರತ ಮಹಿಳಾ ಕ್ರಿಕೆಟ್ ತಂಡ ಗೆದ್ದು ಮತ್ತೊಂದು ಇತಿಹಾಸ ದಾಖಲೆ ನಿರ್ಮಿಸಿದೆ.

ಕೆಲ ದಿನಗಳ ಹಿಂದಷ್ಟೇ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಜಯಿಸಿತ್ತು. ಈ ಖುಷಿ ಬೆನ್ನಲ್ಲೇ ಭಾರತ ಮಹಿಳಾ ಅಂಧರ ಕ್ರಿಕೆಟ್ ತಂಡ ಕೂಡ ತನ್ನ ಚೊಚ್ಚಲ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಕೊಲಂಬೊದಲ್ಲಿ ಭಾನುವಾರ ನಡೆದ ಮೊದಲ ಅಂಧ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ನೇಪಾಳವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿದೆ.

ಶ್ರೀಲಂಕಾದ ಕೊಲಂಬೊದ ಪಿ. ಸರವನಮುತ್ತು ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನೇಪಾಳ ತಂಡವನ್ನು ಮಣಿಸುವ ಮೂಲಕ ಭಾರತ ಅಂಧ ಮಹಿಳಾ ಕ್ರಿಕೆಟ್ ತಂಡ ಟ್ರೋಫಿಗೆ ಮುತ್ತಿಟ್ಟಿದೆ.

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನೇಪಾಳ ತಂಡವು 20 ಓವರ್​ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 114 ರನ್‌ಗಳಿಸಿತು

Post a Comment

0 Comments