ಮುಂಡಿತ್ತಡ್ಕ : ಮುಗು ಶ್ರೀ ಸುಬ್ರಾಯ ದೇವ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕ್ಷೇತ್ರದ ಗರ್ಭಗುಡಿಯ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದ್ದು ನವೆಂಬರ್ 28ಕ್ಕೆ ಬೆಳಿಗ್ಗೆ ಗಂಟೆ 11-59ರ ಶುಭಮುಹೂರ್ತದಲ್ಲಿ ಷಢಾದಾರ ಪ್ರತಿಷ್ಠಾ ಕಾರ್ಯ ನಡೆಯಲಿದೆ. ಇದಕ್ಕಾಗಿ ಪೂರ್ವಭಾವಿ ಸಿದ್ಧತೆಗಳು ಭರದಿಂದ ಸಾಗಿದೆ. ಕ್ಷೇತ್ರ ತಂತ್ರಿವರ್ಯರಾದ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಷಢಾದಾರ ಪ್ರತಿಷ್ಠಾ ಕಾರ್ಯಕ್ರಮ ಜರಗಲಿದೆ. ಈ ಸಂದರ್ಭದಲ್ಲಿ ಶ್ರೀ ಶ್ರೀ ಯೋಗೀ ಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಧಾಮ ಮಾಣಿಲ ಹಾಗೂ ಕೊಡುಗೈ ದಾನಿಗಳು, ವಿವಿಧ ಸಮಿತಿ ಪ್ರಮುಖರು, ಕಾರ್ಯಕರ್ತರು ಗ್ರಾಮದ ಭಕ್ತರು ಪಾಲ್ಗೊಳ್ಳುವರು.
ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದಂಗವಾಗಿ ಜೂನ್ 18ರಂದು ಶ್ರೀ ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಿ, ನ.24ರಂದು ಭೂಮಿಪೂಜೆ ಹಾಗೂ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಕ್ಷೇತ್ರ ಅಭಿವೃದ್ಧಿಗೆ ಜೀರ್ಣೋದ್ಧಾರ ಸಮಿತಿ, ಸೇವಾ ಸಮಿತಿ ಹಾಗೂ ಯುವಕ ಸಂಘ, ಮಹಿಳಾ ಸಂಘ ಸಹಿತ ವಿವಿಧೆಡೆಯ ಸಂಘ ಸಂಸ್ಥೆಗಳು ಭಕ್ತರು ಶ್ರಮದಾನದ ಮೂಲಕ ಸೇವಾ ನಿರತರಾಗಿದ್ದಾರೆ.

0 Comments