ದುಬೈ : ಕನ್ನಡಿಗರ ಕನ್ನಡ ಕೂಟ ದುಬೈ ಯುಎಇ ಮತ್ತು ಗಲ್ಫ್ ಕನ್ನಡ ಮೂವೀಸ್ ಜಂಟಿಯಾಗಿ ಆಯೋಜಿಸಿರುವ "ಕರ್ನಾಟಕ ರಾಜ್ಯೋತ್ಸವ -2025" ಕಾರ್ಯಕ್ರಮವು ನವೆಂಬರ್ ಎಂಟರಂದು ಸಂಜೆ ನಾಲ್ಕು ಮೂವತ್ತರಿಂದ ನಗರದ ಜೆಮ್ಸ್ ಕ್ಯಾಬ್ರೇಡ್ಜ್ ಅಂತಾರಾಷ್ಟ್ರೀಯ ಶಾಲೆ ಕಿಸೀಸ್ ನ ಸಭಾಂಗಣದಲ್ಲಿ ನಡೆಯಲಿದೆ.
ಸಂಜೆ ನಾಲ್ಕು ಮೂವತ್ತರಿಂದ ರಾತ್ರಿಯ ವರೆಗೆ ಜರುಗುವ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು Zee ಕನ್ನಡ ಕಾಮಿಡಿ ಕಿಲಾಡಿಗಳು ತಂಡದವರಿಂದ ಹಾಸ್ಯ ಮನೋರಂಜನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನಡೆಯಲಿವೆ.
"ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ-2025"ಯನ್ನು ಖ್ಯಾತ ಚಲನಚಿತ್ರ ನಟರಾದ ಡಾ.ಶಿವರಾಜ್ ಕುಮಾರ್, "ಕನ್ನಡದ ಕಣ್ಮಣಿ ಪ್ರಶಸ್ತಿ -2025" ಯನ್ನು ಖ್ಯಾತ ಚಲನಚಿತ್ರ ನಟಿ ರಮ್ಯಾ ಮತ್ತು "ಅಂತಾರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ -2025"ಯನ್ನು ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊರವರಿಗೆ ನೀಡಿ ಗೌರವಿಸಲಾಗುವುದು.
ಯುಎಇಯಲ್ಲಿ ಇರುವ ಎಲ್ಲಾ ಕನ್ನಡಿಗರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಹಾಗೂ ಕಾರ್ಯಕ್ರಮದ ಕೊನೆಗೆ ಪ್ರೀತಿ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಂಘಟಕರು ಮಾಧ್ಯಮದ ಮೂಲಕ ತಿಳಿಸಿದ್ದಾರೆ.
ಪ್ರತಿನಿಧಿ ವರದಿ : ವಿಜಯಕುಮಾರ್ ಶೆಟ್ಟಿ ಗಾಣದಮೂಲೆ ದುಬೈ

0 Comments