ಇಸ್ರೇಲ್‌ನಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಭಾರತೀಯ ಮೂಲದ ನರ್ಸ್ ಒಬ್ಬರು ಸಾವಿಗೀಡಾಗಿದ್ದಾರೆ. ಇಸ್ರೇಲ್‌ನಲ್ಲಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಕೇರಳದ ಮಹಿಳೆ ಶರಣ್ಯ ಪ್ರಸನ್ನನ್ (34)ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಕೇರಳದ ಕೊಟ್ಟಾಯಂನ ಚಂಗನಶ್ಶೇರಿಯ ನಿವಾಸಿಯಾಗಿದ್ದು, ವಿಷ್ಣು ಎಂಬುವವರ ಪತ್ನಿಯಾಗಿದ್ದಾರೆ. ಇವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಗ್ಗೆ ಕುಟುಂಬಕ್ಕೆ ಮಾಹಿತಿ ಸಿಕ್ಕಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಮಂಗಳವಾರ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಇವರು ಕುರಿಚಿ ಕಲ್ಲುಂಗಲ್ ಪ್ರಸನ್ನನ್ ಹಾಗೂ ಶೋಭಾ ದಂಪತಿಯ ಪುತ್ರಿಯಾಗಿದ್ದಾರೆ. ಇಬ್ಬರು ಮಕ್ಕಳು ಹಾಗೂ ಪತಿಯನ್ನು ಅವರು ಅಗಲಿದ್ದಾರೆ.

0 Comments