ಬೆಂಗಳೂರು: ಹೊರ ವಲಯದ ಚಿಕ್ಕಬಾಣಾವರ ರೈಲು ನಿಲ್ದಾಣದ ಸಮೀಪ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬಡಿದು ಕೇರಳ ಮೂಲದ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ ಈ ದುರಂತ ನಡೆದಿದೆ. ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅತಿ ವೇಗದಲ್ಲಿ ಬಂದು ಇಬ್ಬರು ವಿದ್ಯಾರ್ಥಿಗಳಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಪ್ರಥಮ ವರ್ಷ ಬಿ. ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಟರ್ಲಿನ್ ಎಲಿಜಾ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರ ದೇಹಗಳು ಛಿದ್ರ ಛಿದ್ರಗೊಂಡು ಹಳಿಗಳ ಮೇಲೆ ಚೆಲ್ಲಾಪಿಲ್ಲಿಯಾಗಿದ್ದವು. ಮೃತ ವಿದ್ಯಾರ್ಥಿಗಳನ್ನು ಕೇರಳ ಮೂಲದವರು ಎನ್ನಲಾಗುತ್ತಿದೆ. ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

0 Comments