ಕಾಞಂಗಾಡ್: ತ್ರಿಕರಿಪುರ ಸಂಘಟನಾ ಮಂಡಲದ ಪಂಚಾಯತು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಲಾಯಿತು. ಈ ಸಂಬಂಧ ನಡೆದ ಕಾರ್ಯಕರ್ತರ ಸಮಾವೇಶವನ್ನು ಪಕ್ಷದ ಜಿಲ್ಲಾ ಅಧ್ಯಕ್ಷೆ ಎಂ.ಎಲ್.ಅಶ್ವಿನಿ ಉದ್ಘಾಟಿಸಿದರು. ಮಂಡಲ ಅಧ್ಯಕ್ಷ ಟಿ.ವಿ.ಶಿಬಿನ್ ಅಧ್ಯಕ್ಷತೆ ವಹಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನಿಲ್, ಬಿಡಿಜೆಎಸ್ ಜಿಲ್ಲಾ ಕಾರ್ಯದರ್ಶಿ ಕೆ.ಕುಂಞಿಕೃಷ್ಣನ್, ಇತರ ಬಿಜೆಪಿ ನೇತಾರರಾದ ಟಿ.ಕುಂಞಿರಾಮನ್, ಕೆ.ಶಶಿಧರನ್ ಮೊದಲಾದವರು ಉಪಸ್ಥಿತರಿದ್ದರು.

0 Comments