ಕುಂಬಳೆ : ಆರಿಕ್ಕಾಡಿ ರೈಲು ಹಳಿಯಲ್ಲಿ ಯುವಕನೊಬ್ಬನ ಮೃತದೇಹ ರೈಲಿಗೆ ಬಡಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೀಲಿ ಟ್ರ್ಯಾಕ್ ಪ್ಯಾಂಟ್ ಮತ್ತು ಹಸಿರು ಟೀ ಶರ್ಟ್ ಧರಿಸಿದ್ದು ತಲೆ ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಬಗ್ಗೆ ಕುಂಬಳೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ಬುಧವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನ ಮೃತದೇಹ ಕಂಡಿದ್ದರು. ಮೃತದೇಹವನ್ನು ಗುರುತಿಸಲು ಯಾವುದೇ ಗುರುತುಗಳು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

0 Comments