ದುಬೈ : ವೈಮಾನಿಕ ಪ್ರದರ್ಶನದ ಸಂದರ್ಭದಲ್ಲಿ ತೇಜಸ್ ಲಘು ಯುದ್ಧ ವಿಮಾನ (LCA MK-1) ಪತನಗೊಂಡು ಭಾರತೀಯ ವಾಯುಪಡೆಯ (ಐಎಎಫ್) ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸಯಾಲ್ (37) ಮೃತಪಟ್ಟಿದ್ದಾರೆ. ಕಾರ್ಯಕ್ರಮದ ಕೊನೆಯ ಕ್ಷಣ ಕೆಳಮಟ್ಟದ ಏರೋಬ್ಯಾಟಿಕ್ ಕುಶಲತೆಯನ್ನು ನಿರ್ವಹಿಸುತ್ತಿದ್ದಾಗ, ದುರದೃಷ್ಟಕರವಾಗಿ ಫೈಟರ್ ಜೆಟ್ ಪತನಗೊಂಡಿತು. ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯವರು. ಸ್ಯಾಲ್ ಅವರ ಪತ್ನಿ ಕೂಡ ಭಾರತೀಯ ವಾಯುಪಡೆ ಅಧಿಕಾರಿ ಆಗಿದ್ದಾರೆ, ಆರು ವರ್ಷದ ಮಗಳು ಮತ್ತು ಅವರ ಪೋಷಕರನ್ನು ಅವರು ಅಗಲಿದ್ದಾರೆ. ಅವರು ಸುಜನ್‌ಪುರ್ ತಿರಾದ ಸೈನಿಕ್ ಶಾಲೆಯಿಂದ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ಡಿಸೆಂಬರ್ 24, 2009 ರಂದು ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದ್ದರು.

0 Comments