ಪುತ್ತೂರು : ಸ್ವತಃ ತನ್ನ ಗೆಳೆಯನ ಜತೆ ಪತ್ನಿಯ ನಿರಂತರ ಸಂಪರ್ಕ ಕೌಟುಂಬಿಕವಾಗಿ ಮನನೊಂದು ಇಲಿ ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ವ್ಯಕ್ತಿ ಕಡಬದ ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ರಾಕೇಶ್ ಕೆ.ಎಸ್ (37) ಎಂದು ಗುರುತಿಸಲಾಗಿದೆ. ಈತನ ಪತ್ನಿಯೊಂದಿಗೆ ಈತನ ಗೆಳೆಯನೊಬ್ಬ ಮೊಬೈಲ್ ಪೋನ್ ಮೂಲಕ ಸಂಪರ್ಕದಲ್ಲಿರುವ ವಿಷಯ ತಿಳಿದು ತೀವ್ರ ನೊಂದು ನ.19 ರಂದು ಅಮಲು ಪದಾರ್ಥದೊಂದಿಗೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದ. ಅಸ್ವಸ್ಥಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 Comments