ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಕ್ವಾಮಿಡಿ ಟೀಸರ್ ಮಂಗಳೂರಿನ ಸಿಟಿಸೆಂಟರ್ ಮಾಲ್ ನಲ್ಲಿ ಬಿಡುಗಡೆಗೊಂಡಿತು.ಜೈ ಸಿನಿಮಾ ತುಳು ಮತ್ತು ಕನ್ನಡ ಭಾಷೆಯಲ್ಲಿ ನವಂಬರ್ 14 ರಂದು ತೆರೆ ಕಾಣಲಿದೆ.
ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಹೆಜ್ಜೆ ಇಡುತ್ತಿದ್ದೇವೆ. ಬಹಳಷ್ಟು ಯಶಸ್ವಿ ಸಿನಿಮಾಗಳನ್ನು ನೀಡಿದ ನಿರ್ಮಾಪಕರು ನಿರ್ದೇಶಕರು ತುಳುಚಿತ್ರರಂಗದಲ್ಲಿ ಇದ್ದಾರೆ. ಅವರ ಮಾರ್ಗದರ್ಶನ ಮತ್ತು ಅವರ ಅನುಭವಗಳನ್ನು ಪಡೆದು ಸಿನಿಮಾ ನಿರ್ಮಿಸಿದ್ದೇವೆ. ಜೈ ಸಿನಿಮಾ ನನ್ನ ಕನಸು, ಶ್ರದ್ದೆ ಭಕ್ತಿ ಇಟ್ಟು ಸಿನಿಮಾ ಮಾಡಿದ್ದೇವೆ. ಈ ಸಿನಿಮಾಕ್ಕಾಗಿ ಬಹಳಷ್ಟು ಜನರು ಬೆವರು ಸುರಿಸಿದ್ದಾರೆ ನನ್ನ ಮೇಲೆ ನಂಬಿಕೆ ಇಟ್ಟು ಜೈ ಸಿನಿಮಾ ನೋಡಿ ಎಂದು ಚಿತ್ರದ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ತಿಳಿಸಿದರು.
ರಿಕ್ಷಾಚಾಲಕರು ದೇವದಾಸ್ ಕಾಪಿಕಾಡ್ ಮತ್ತು ಅರವಿಂದ ಬೋಳಾರ್ ಅವರ ಮುಖವಾಡ ಧರಿಸಿದ ಕಲಾವಿದರೊಂದಿಗೆ ಟ್ಯಾಬ್ಲೋದೊಂದಿಗೆ ಪೆನ್ ಡ್ರೈವ್ ಹಿಡಿದುಕೊಂಡು ವೇದಿಕೆಗೆ ಬಂದು ವಿಭಿನ್ನವಾಗಿ ಟೀಸರನ್ನು ಬಿಡುಗಡೆಗೊಳಿಸಿದರು.
ಸಮಾರಂಭದಲ್ಲಿ ತಾರಾನಾಥ ಶೆಟ್ಟಿ, ಪ್ರಕಾಶ್ ಪಾಂಡೇಶ್ವರ್ ಲಂಚುಲಾಲ್ ಕೆಎಸ್, ಪಮ್ಮಿ ಕೊಡಿಯಾಲ್ ಬೈಲ್, ಭೋಜರಾಜ ವಾಮಂಜೂರು, ಮಾಜಿ ಕಾರ್ಪೋರೇಟರ್ ದಿವಾಕರ ಪಾಂಡೇಶ್ವರ್, ಮಂಜುನಾಥ ಅತ್ತಾವರ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಕಲಾವಿದೆ ಜಯಶೀಲ, ಮಂಗೇಶ್ ಭಟ್ ವಿಟ್ಲ, ಪ್ರದೀಪ್ ಆಳ್ವ ಕದ್ರಿ, ಶ್ಯಾಮ್ ಕಹಳೆ, ಮಂಜುನಾಥ ಅತ್ತಾವರ, ಪ್ರೇಮ್ ಶೆಟ್ಟಿ ಸುರತ್ಕಲ್, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.
"ಜೈ" ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಜಿಲ್ಲೆಯ ಖ್ಯಾತನಾಮ ಕಲಾವಿದರು ಅಭಿನಯಿಸಿದ್ದಾರೆ.
ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.
ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಚಿತ್ರಕತೆ ರೂಪೇಶ್ ಶೆಟ್ಟಿ ಮತ್ತು ವೇಣು ಹಸ್ರಳ್ಳಿ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.
"'ಜೈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ, ಡಾ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್ ಇನ್ನಿತರರು ಅಭಿನಯಿಸಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ.
ನವಂಬರ್ 14 ರಂದು "ಜೈ" ಸಿನಿಮಾ ತೆರೆ ಕಾಣಲಿದೆ.

0 Comments