Ticker

6/recent/ticker-posts

Ad Code

ಬಂದಿಯೋಡು ಸಮೀಪ ಮುಟ್ಟಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ವಾಹನ ಆಪಘಾತ


 ಕಾಸರಗೋಡು: ಬಂದಿಯೋಡು ಸಮೀಪದ ಮುಟ್ಟಂ  ರಾಷ್ಟ್ರೀಯ ಹೆದ್ದಾರಿಯಲ್ಲಿ ಥಾರ್ ಜೀಪ್ ಮತ್ತು ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಹಲವಾರು ಜನರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ಪ್ರಾಥಮಿಕ ವರದಿ ಲಭಿಸಿದೆ. 

 ಭಾನುವಾರ ಸಂಜೆ 7.45 ರ ಸುಮಾರಿಗೆ ಮುಟ್ಟಂ  ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಥಾರ್ ಜೀಪ್ ಪಲ್ಟಿಯಾಗಿದೆ.

ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಕಾರಿನಲ್ಲಿದ್ದ ಜನರು ಮಚ್ಚಂಪಾಡಿ  ನಿವಾಸಿಗಳೆಂದು ಗುರುತಿಸಲಾಗಿದ್ದು 

ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ  ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಮಚ್ಚಂಪಾಡಿಯ ಫಾತಿಮತ್ ಮಿರ್ಸಾಥ್ (30)ಎಂದು ಗುರುತಿಸಲಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Post a Comment

0 Comments