ಉಡುಪಿ: ಶ್ರೀಕೃಷ್ಣ ಮಠದ ಪರಿಸರದಲ್ಲಿ ನ. 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು ಕಾರ್ಯಕ್ರಮದ ಸಿದ್ಧತೆ ಮತ್ತು ವೇದಿಕೆ ನಿರ್ಮಾಣ ಕಾರ್ಯದ ಪರಿಶೀಲನೆಯನ್ನು ಎಸ್ ಜಿ ಪಿ ತಂಡ ಮಂಗಳವಾರ ಬೆಳಗ್ಗೆ ನಡೆಸಿದೆ. ಈ ವೇಳೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ಉಡುಪಿ ಎಸ್‌ಪಿ ಹರಿರಾಮ್ ಶಂಕರ್, ಶಾಸಕ ಯಶ್‌ಪಾಲ್ ಎ. ಸುವರ್ಣ ಸಾಥ್ ನೀಡಿದರು. ಇನ್ನೊಂದು ತಂಡ ಭದ್ರತೆ ವಿಚಾರವಾಗಿ ಪರಿಶೀಲನೆಯನ್ನು ನಡೆಸಿದೆ. ಆದಿಉಡುಪಿಯ ಹೆಲಿಪ್ಯಾಡ್, ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಸಂದರ್ಭದಲ್ಲಿ ಭದ್ರತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಭದ್ರತೆಗೆ ಅನುಕೂಲವಾಗುವಂತೆ ಕಾರ್ಯಕ್ರಮ ನಡೆಯುವ ಸ್ಥಳ, ರಸ್ತೆ ಹಾಗೂ ಮತ್ತಿತರ ಕಡೆಗಳಲ್ಲಿ ಸಿಸಿ ಕ್ಯಾಮರ ಅಳವಡಿಸಬೇಕು. ಅನಧಿಕೃತ ಬ್ಯಾನರ್, ಬಂಟಿಂಗ್ಸ್‌ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದರು.

0 Comments