ಕಾಸರಗೋಡು: ಪ್ಲಸ್ ಟು ಕಲಿಯುತ್ತಿರುವ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬೇಕಲ ಪೊಲೀಸರು ಎರಡು ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಬಾಲಕಿಯ ತಾಯಿಯ ಗೆಳೆಯ ಸುರೇಶ್, ಪಾಣತ್ತೂರು ನಿವಾಸಿ ಅನಸ್ ಎಂಬಿವರ ವಿರುದ್ದ ಕೇಸು ದಾಖಲಿಸಲಾಗಿದೆ. ಅನಸ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಶಾಲೆಯಲ್ಲಿ ಕೌನ್ಸಿಲಿಂಗ್ ನಡೆಸಿದಾಗ ಕಿರುಕುಳ ಪ್ರಕರಣ ಬೆಳಕಿಗೆ ಬಂತು. ಅದರಂತೆ ಪೊಲೀಸರು ತನಿಖೆ ನಡೆಸಿ ಕೇಸು ದಾಖಲಿಸಿದರು.

0 Comments