Ticker

6/recent/ticker-posts

Ad Code

ಗಾಯಗೊಂಡು ತುರ್ತು ನಿಗಾದಲ್ಲಿದ್ದ ವಧುವಿಗೆ ಆಸ್ಪತ್ರೆಯಲ್ಲೇ ತಾಳಿ ಕಟ್ಟಿದ ವರ


ಆಲಪ್ಪುಳ :
 ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ಆಸ್ಪತ್ರೆಯಲ್ಲಿಯೇ  ವರ ತಾಳಿ ಕಟ್ಟಿರುವ ಅಪರೂಪದ ಪ್ರಕರಣ ವರದಿಯಾಗಿದೆ. ಕೇರಳದ ಆಲಪ್ಪುಳದ ಥಂಪೋಲಿಯಲ್ಲಿ ಈ ಘಟನೆ ನಡೆದಿದೆ. ಮದುವೆಗಾಗಿ ತಯಾರಾಗುವ ಮುನ್ನ ಮೇಕಪ್ ಮಾಡಿಸಿಕೊಳ್ಳಲು  ಬೆಳಗ್ಗೆಯೇ ಮನೆಯಿಂದ ತೆರಳಿದ್ದ ವಧು ಅವನಿ ಅನಿರೀಕ್ಷಿತ ಅಪಘಾತದಿಂದ ಗಾಯಗೊಂಡು ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದರು. ಬಳಿಕ ವಿಶೇಷ ಆರೈಕೆಗಾಗಿ ಕೊಚ್ಚಿಯ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಸಂದರ್ಭ ಆಸ್ಪತ್ರೆಗೆ ಆಗಮಿಸಿದ್ದ ವರ ಶರೋನ್ ನಿಶ್ಚಯಿಸಿದ ಮುಹೂರ್ತಕ್ಕೆ ಆಸ್ಪತ್ರೆಯ ಬೆಡ್ ನಲ್ಲಿ ಮಲಗಿದ್ದ ವಧುವಿಗೆ ತಾಳಿ ಕಟ್ಟುವ ಮೂಲಕ ವಿವಾಹ ನಡೆದಿದೆ.  ಕುಟುಂಬ ಸದಸ್ಯರು ಇದಕ್ಕೆ ಸಾಕ್ಷಿಯಾಗಿದ್ದರು. ಇಂದು ವಧು ಅವನಿಯ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ನಡೆಯಲಿದೆ. ಈ ಮಧ್ಯೆ ಆಲಪ್ಪುಳದಲ್ಲಿರುವ ವಿವಾಹ ಸ್ಥಳಕ್ಕೆ ಆಗಮಿಸಿದ ಅತಿಥಿಗಳಿಗೆ ಮೊದಲೇ ಯೋಜಿಸಿದಂತೆ ಭರ್ಜರಿ ಭೋಜನ  ನೀಡಲಾಯಿತು.

Post a Comment

0 Comments