ಬೆಂಗಳೂರು : ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಅವರು ನಿನ್ನೆ ಬೆಂಗಳೂರಿನ ಆರ್‌ಆರ್ ನಗರದಲ್ಲಿ ತಮ್ಮ ವಾಸ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಪೋಷಕರು ನಿರಂತರವಾಗಿ ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದರು. ಆದರೆ ತಾನು ಮದುವೆಗೆ ಸಿದ್ಧಳಾಗಿರಲಿಲ್ಲ. ಇದಲ್ಲದೆ, ಕೆಲವು ವೈಯಕ್ತಿಕ ಕಾರಣಗಳಿಂದಾಗಿ ಖಿನ್ನತೆಗೆ ಒಳಗಾಗಿರುವುದರಿಂದ ಆತ್ಮಹತ್ಯೆಗೈದಿರುವುದಾಗಿ ಡೆತ್ ನೋಟ್‌ನಲ್ಲಿ ಬರೆಯಲಾಗಿದೆ.
ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ.ಎಂ ಅವರು ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ʻಜೀವ ಹೂವಾಗಿದೆ', ʻಸಂಘರ್ಷʼ, ʻಮಧುಮಗಳುʼ, ʻನೀನಾದೆ ನಾʼ ಧಾರಾವಾಹಿಗಳಲ್ಲಿ ಅವರು ಪೋಷಕ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ತಮಿಳು ಧಾರಾವಾಹಿಯಲ್ಲೂ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದರು. ತಮಿಳಿನ ʻಗೌರಿʼ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ʻಕನಕʼ ಹಾಗೂ ʻದುರ್ಗಾʼ ಎನ್ನುವ ದ್ವಿಪಾತ್ರದಲ್ಲಿ ನಟಿಸುತ್ತಿದ್ದರು. ಸಿರೀಯಲ್ ಜಗತ್ತಿನಲ್ಲಿ ಮಿಂಚುತ್ತಿದ್ದ ನಟಿ ನಂದಿನಿ ಯಶಸ್ಸಿನ ಉತ್ತುಂಗದಲ್ಲಿದ್ದಾಗಲೇ ಈ ರೀತಿಯ ನಿರ್ಧಾರ ತಳೆದಿರುವುದು ಸೀರಿಯಲ್ ಪ್ರೇಮಿಗಳನ್ನು ದುಃಖತಪ್ತರನ್ನಾಗಿಸಿದೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

0 Comments