ತಿರುವನಂತಪುರ : ನಿಲ್ಲಿಸಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಯ ಎದುರು ನಗ್ನತೆ ಪ್ರದರ್ಶಿಸಿದ ಯುವಕನನ್ನು ಬಂಧಿಸಲಾಗಿದೆ. ತಿರುವನಂತಪುರದಲ್ಲಿ ಘಟನೆ ನಡೆದಿದ್ದು ಪನ್ನಿಯೋಡು ಮೂಲದ ಸಜನ್ (37) ಎಂಬಾತನನ್ನು ಬಂಧಿಸಲಾಗಿದೆ. ತಿರುವನಂತಪುರಂನ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಕುಳಿತಿದ್ದ ಯುವತಿಯ ಮುಂದೆ ನಗ್ನತೆ ಪ್ರದರ್ಶಿಸಿ ಯುವಕ ಅಸಭ್ಯ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ತನ್ನ ಮೊಬೈಲ್ ಫೋನ್‌ನಲ್ಲಿ ದೃಶ್ಯಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಳು. ಇದನ್ನು ನೋಡಿದ ಯುವಕ ಬಸ್‌ನಿಂದ ಇಳಿದು ಓಡಿಹೋದ. ತಕ್ಷಣ ಯುವತಿ ಕಂಡಕ್ಟರ್ ಮತ್ತು ಇತರ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾಳೆ. ನಂತರ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

0 Comments