ಮಂಗಳೂರು : ತಲ್ವಾರ್ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪಿಗಳನ್ನು ಪೋಲಿಸರು ಬಂಧಿಸಿ ಬೆಂಡೆತ್ತಿದ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ಬಂಧಿತರನ್ನು ಜೆ.ಡಮ್ ರೋಡ್ ಬಂದರು ನಿವಾಸಿ ಅಮೀರ್ ಸುಹೇಲ್ (28) ಹಾಗೂ ಉರುಂದಾಡಿಗುಡ್ಡೆ ಕಾವೂರು ನಿವಾಸಿ ಸುರೇಶ (29) ಎಂದು ತಿಳಿದುಬಂದಿದೆ. ಆರೋಪಿಗಳು ಡಿ13 ರಂದು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಖಾತೆಯಲ್ಲಿ ಅಮೀರ್ ಸುಹೇಲನು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಮಾಡಿದ್ದರು. ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ಅಮೀರ್ ಸುಹೇಲ್ ಹಾಗೂ ಸುರೇಶ ಎಂಬುವವನ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಆರೋಪಿಗಳನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ರವರ ಮಾರ್ಗದರ್ಶನದಂತೆ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ರಾಘವೇಂದ್ರ ಎಂ. ಬೈಂದೂರುರವರು, ಪೊಲೀಸ್ ಉಪನಿರೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಸಂಭಾಜಿ ಕದಂ, ಕೆಂಚನ ಗೌಡ, ಶರಣಪ್ಪ, ರಾಘವೇಂದ್ರ, ರಿಯಾಜ್, ರವರುಗಳು ಆರೋಪಿತರನ್ನು ಪತ್ತೆಮಾಡಿ ರಿಮಾಂಡಿನಲ್ಲಿರಿಸಿದ್ದರು.

0 Comments