Ticker

6/recent/ticker-posts

Ad Code

ಬದಿಯಡ್ಕದಲ್ಲಿ ಬಿಜೆಪಿಯ ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನೆ : ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆ

 

ಬದಿಯಡ್ಕ : ಚುನಾಯಿತ ಬಿಜೆಪಿ  ಅಭ್ಯರ್ಥಿಗಳಿಗೆ ಅಭಿನಂದನೆ ಮತ್ತು ಪಂಚಾಯತ್ ಆಡಳಿತದ ಅಧ್ಯಕ್ಷ ಪದವಿಗೆ ಅರ್ಹ ಜನಪ್ರತಿನಿಧಿಯ ಆಯ್ಕೆಯ ಸಭೆ ಸಂಸ್ಕೃತಿ ಭವನದಲ್ಲಿ ಜರಗಿತು. ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಅವರು ಸಭೆಯನ್ನು ಉದ್ಘಾಟಿಸಿದರು. ಜಿಲ್ಲೆಯಲ್ಲಿ ಎಡ ಮತ್ತು ಬಲ ರಂಗಗಳು ಯಾವುದೇ ಅಭಿವೃದ್ಧಿಯನ್ನು ತರಲು ಸಾಧ್ಯವಿಲ್ಲ ಮತ್ತು ಬಿಜೆಪಿ ಅಧಿಕಾರಕ್ಕೆ ಬರುವ ಪಂಚಾಯತ್‌ಗಳಲ್ಲಿ ಬಿಜೆಪಿ ದೀರ್ಘಕಾಲೀನ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಯಶಸ್ವಿಯಾಗಿ ಕಾರ್ಯಗತಗೊಳಿಸುತ್ತದೆ ಎಂದು ಅಶ್ವಿನಿ ಹೇಳಿದರು. ನೂತನವಾಗಿ ಆಯ್ಕೆಯಾದ ಪ್ರತಿನಿಧಿಗಳನ್ನು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷರು ಶಾಲು ಹೊದಿಸಿ ಸನ್ಮಾನಿಸಿದರು. ಬದಿಯಡ್ಕ ಪಂಚಾಯತ್ ಚುನಾವಣಾ ಸಮಿತಿ ಅಧ್ಯಕ್ಷ ಜಯರಾಮ ಚೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ, ಬಿಜೆಪಿ ಬದಿಯಡ್ಕ ಮಂಡಲ ಅಧ್ಯಕ್ಷ ಎಂ. ಗೋಪಾಲಕೃಷ್ಣನ್, ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಬದಿಯಡ್ಕ  ಪೂರ್ವ ಸಮಿತಿ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಪ್ರಭು ಮತ್ತು ಡಿ.ಕೆ. ನಾರಾಯಣನ್ ನಾಯರ್ ಮೊದಲಾದವರು  ಮಾತನಾಡಿದರು.

Post a Comment

0 Comments