ಮಂಜೇಶ್ವರ : ಕರ್ನಾಟಕದಿಂದ ಕೇರಳಕ್ಕೆ ಬಸ್ಸಿನಲ್ಲಿ ಸಾಗಿಸಲು ಯತ್ನಿಸಿದ 67.5ಲಕ್ಷ ರೂ ಕಾಳಧನ ಸಹಿತ ಓರ್ವನನ್ನು ಬಂಧಿಸಲಾಗಿದೆ. ವಾಮಂಜೂರು ಚೆಕ್ ಪೋಸ್ಟ್ ಬಳಿ ಅಬಕಾರಿ ಅಧಿಕಾರಿಗಳು ಬಸ್ ತಡೆದು ನಡೆಸಿದ ಕಾರ್ಯಾಚರಣೆಯಲ್ಲಿ ದಾಖಲೆ ರಹಿತವಾಗಿ ಸಾಗಿಸುತ್ತಿದ್ದ ಹಣ ವಶಪಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ತಳಿಪರಂಬ ಚೇಲೇರಿಮುಕ್ಕ್ ನಿವಾಸಿ ಸಮೀರ್ (41)ಎಂಬಾತನನ್ನು ಬಂಧಿಸಲಾಗಿದೆ. ಇಂದು ಬೆಳಿಗ್ಗೆ 11ರ ವೇಳೆಗೆ ಅಬಕಾರಿ ಇನ್ಸ್ ಪೆಕ್ಟರ್ ಸಂತೋಷ್ ಕುಮಾರ್ ನೇತೃತ್ವದಲ್ಲಿ ಸಿಬಂದಿಗಳು ಕಾರ್ಯಾಚರಣೆ ನಡೆಸಿದರು. ಸಮೀಪದ ಹೊಸಬೆಟ್ಟು ಯೂನಿಯನ್ ಬ್ಯಾಂಕ್ ನಲ್ಲಿ ಹಣವನ್ನು ಎಣಿಸಿ, ಬಳಿಕ ಮಂಜೇಶ್ವರ ಪೋಲೀಸರಿಗೆ ಪ್ರಕರಣ ಹಸ್ತಾಂತರಿಸಲಾಯಿತು.

0 Comments